ಬೆಂಗಳೂರು: ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈವಾಗಿನ ಸಿದ್ದರಾಮಯ್ಯ ಬೇರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರುವುದು ಬಹಳ ವಿರಳ. ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ.
ಸಿದ್ದರಾಮಯ್ಯ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ. ಇವಾಗ ವರಿಷ್ಠರು ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ. ಸರ್ಕಾರದಲ್ಲಿ ಹೈಕಮಾಂಡ್ನಿಂದಲೂ ಹಸ್ತಕ್ಷೇಪ ನಡೆಯುತ್ತಿದೆ. ಸರ್ಕಾರದ ರಿಮೋಟ್ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲಿದೆ. ನಿನ್ನೆಯ ಸಭೆಯಲ್ಲಿ ಕಪ್ಪ ಕಾಣಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಡಿದು ಕಪ್ಪ ಕಾಣಿಕೆ ಹೈಕಮಾಂಡ್ಗೆ ಕೊಡೋದು ಹೊಸದಲ್ಲ. ಇವಾಗ ನಿನ್ನೆ ನಡೆದ ಸಭೆಯಲ್ಲೂ ಮುಂದುವರಿದಿದೆ ಎಂದರು.
ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ FIR: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ಬಗ್ಗೆ ನಮ್ಮ ಅಭ್ಯಂತರ ಇಲ್ಲ. ಆದರೆ ಸಚಿವ ಸಂಪುಟವೇ ಹೋಗಿ ಸಭೆ ಮಾಡುವುದು ಸರಿಯಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ ಜನರು ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತಂದಿದ್ದಾರೆ. ಕರ್ನಾಟಕದ ಜನರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ರಾಜ್ಯ ಸರ್ಕಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ ಅನಿಸುತ್ತದೆ. ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಹಗಲು ದರೋಡೆ ನಡೆಯುತ್ತಿದೆ. ತಮ್ಮ ಪಕ್ಷದ ಶಾಸಕರೇ ಕಂಪ್ಲೆಂಟ್ ಮಾಡಿದರೂ ಕ್ರಮ ಕೈಗೊಂಡಿಲ್ಲ. ಭ್ರಷ್ಟಾಚಾರ ಸ್ಪಷ್ಟವಾಗಿ ಕಾಣುತ್ತಿದೆ, ಅಭಿವೃದ್ಧಿ ಮೇಲೆ ಪೆಟ್ಟು ಬೀಳುತ್ತಿದೆ ಎಂದರು
bigtvnews | Hubli Dharwad News | Kannada News | Karnataka News Hubli News | News In Hubli | Local news





