Breaking News

ತಮಿಳುನಾಡು ಸಚಿವ ಸೆಂಥಿಲ್‌ಗೆ ಮತ್ತೆ ಇಡಿ ಶಾಕ್‌!

ಚೆನ್ನೈ: ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ತಮಿಳುನಾಡಿನ ಸಚಿವ ವಿ.ಸೆಂಥಿಲ್‌ ಬಾಲಾಜಿ ಹಾಗೂ ಇತರರ ಮೇಲಿನ ಕೇಸ್‌ ಸಂಬಂಧ ಜಾರಿ ನಿರ್ದೇಶನಾಲಯವು (ಇಡಿ) ಇಂದು ಮತ್ತೊಮ್ಮೆ ಶೋಧ ನಡೆಸಿದೆ ಎಂದು ವರದಿಯಾಗಿದೆ.

ಈ ಪ್ರಕರಣದಲ್ಲಿ ಆಪಾದಿತರ ಬೇನಾಮಿದಾರರಿಗೆ ಸಂಬಂಧಿಸಿದ ಸ್ಥಳಗಳು, ಕೆಲವು ಸಂಸ್ಥೆಗಳಿಗೆ ಸಂಬಂಧಿಸಿದ ಸ್ಥಳಗಳು, ಕೊಯಮತ್ತೂರು ಹಾಗೂ ಕರೂರು ಸೇರಿದಂತೆ ಅನೇಕ ಕಡೆಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

ತಮಿಳುನಾಡಿನ ಸಾರಿಗೆ ಇಲಾಖೆಯಲ್ಲಿ ಉದ್ಯೋಗ ಕೊಡಿಸಲು ಲಂಚ ಪಡೆದಿರುವ ಆರೋಪದ ಮೇಲೆ ಸೆಂಥಿಲ್‌ ಬಾಲಾಜಿ ಅವರನ್ನು ಕಳೆದ ಜೂನ್‌ ತಿಂಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ನಂತರ ಅವರ ಬಳಿ ಯಾವುದೇ ಖಾತೆ ಇಲ್ಲದಿದ್ದರೂ ಸಚಿವರಾಗಿಯೇ ಸೆಂಥಿಲ್‌ ಮುಂದುವರಿದಿದ್ದಾರೆ.

ಈ ಪ್ರಕರಣದಲ್ಲಿ ತಮ್ಮ ಬಂಧಿಸಿದ್ದ ಬಗ್ಗೆ ಮದ್ರಾಸ್‌ ಹೈಕೋರ್ಟ್‌ ನೀಡಿದ್ದ ತೀರ್ಪು ಪ್ರಶ್ನಿಸಿದ್ದ ಸೆಂಥಿಲ್‌, ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಈ ಕುರಿತು ನಿನ್ನೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ತನ್ನ ತೀರ್ಪನ್ನು ಕಾಯ್ದಿರಿಸಿರುವುದಾಗಿ ಹೇಳಿತ್ತು

Share News

About BigTv News

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *