ಹುಬ್ಬಳ್ಳಿ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆ ಪಕ್ಷದ ರಾಜ್ಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಕಾಂಗ್ರೆಸ್ ಸಹಯೋಗದೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.
ಹೌದು.. ಹುಬ್ಬಳ್ಳಿಯ ಹೃದಯ ಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೇ ಪರಸ್ಪರ ಸಿಹಿ ತಿನ್ನಿಸಿ ರಾಹುಲ್ ಗಾಂಧಿಗೆ ಶುಭ ಹಾರೈಸಿದರು. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಕಾಂಗ್ರೆಸ್ ನಾಯಕರು ಬಣ್ಣಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಕುರಿತು ಅಭಿನಂದನೆ ಸಲ್ಲಿಸಿರುವ ಕೈ ನಾಯಕರು, ಸುಪ್ರೀಂ ಕೋರ್ಟಿಂದ ರಾಹುಲ್ ಗಾಂಧಿಯವರಿಗೆ ನ್ಯಾಯ ದೊರಕಿದೆ. ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕಿರುವ ಜಯ, ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಆ ಕೆಲಸವನ್ನು ಸುಪ್ರೀಂ ಕೋರ್ಟ್ ಮಾಡಿದೆ ಎಂದು ಸಂಭ್ರಮಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





