ಹುಬ್ಬಳ್ಳಿ: ಸಂಘ ಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗೀಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್ಟಿಪಿಐ ವತಿಯಿಂದ ಚನ್ನಮ್ಮ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ಮಾಡಿದರು.
ನೂರಾರು SDPI ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ, ಈ ಹಿಂಸಾಚಾರ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕಿದೆ ಎಂದು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





