Breaking News

ಜಮೀನು ವಿವಾದದ ಹಿನ್ನೆಲೆ ರೈತ ಆತ್ಮಹತ್ಯೆ….

ಮೈಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮರಕ್ಕೆ ಕಟ್ಟಿಹಾಕಿ ಥಳಿಸಿದ್ದರಿಂದ ಅವಮಾನಿತರಾಗಿ, ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನಂತೆ ಮೂವರ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿ ಗ್ರಾಮದ ಗುರುರಾವ್ ಭಾಂಗೆ (60) ಆತ್ಮಹತ್ಯೆಗೆ ಶರಣಾದವರು. ಇವರಿಗೆ ಪತ್ನಿ, ಮಕ್ಕಳಿದ್ದಾರೆ. ಪತಿಯ ಆತ್ಮಹತ್ಯೆಗೆ ಗ್ರಾಮದ ಮಹೇಶ್ ಮತ್ತವರ ಪತ್ನಿ ಸಾಕಮ್ಮ ಹಾಗೂ ಇವರ ಪುತ್ರ ರಂಜನ್‌ ಅವರ ಕಿರುಕುಳವೇ ಕಾರಣ ಎಂದು ಆರೋಪಿಸಿ ಗುರುರಾವ್ ಪತ್ನಿ ಮಂಜುಳಾ ಬಾಯಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share News

About BigTv News

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *