Breaking News

ಪೌರ ನೌಕರ ಸಂಘದ ಧಾರವಾಡ ಜಿಲ್ಲಾ ಉಪಾಧ್ಯಕ್ಷರಾಗಿ ಶಿವಾನಂದ ಕದಂ ಆಯ್ಕೆ…

ನವಲಗುಂದ: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಧಾರವಾಡ ಜಿಲ್ಲಾ ಉಪಾಧ್ಯಕ್ಷರಾಗಿ ಪಟ್ಟಣದ ಪುರಸಭೆ ಪೌರ ನೌಕರ ಶಿವಾನಂದ ಕದಂ ಆಯ್ಕೆಯಾಗಿದ್ದಾರೆ. ಈ ಮೊದಲು ನವಲಗುಂದದ ತಾಲೂಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ನೂತನ ಆಯ್ಕೆಯಾದ ಕದಂ ನೌಕರರ ಹಿತಾಸಕ್ತಿಗಾಗಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಹಾಗೂ ಯಾವುದೇ ಕುಂದು ಕೊರತೆಗಳ ಬಗ್ಗೆ ಜೊತೆಗೂಡಿ ಗಮನ ಸೆಳೆಯಲು ಸಹಕಾರಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.ಉಪಾಧ್ಯಕ್ಷ ಆಯ್ಕೆಯಾದ ಶಿವಾನಂದ ಕದಂ ಅವರನ್ನು ಮುಖ್ಯಾಧಿಕಾರಿ ವೆಂಕಟೇಶ ನಾಗನೂರ ಹಾಗೂ ಪುರಸಭಾ ಸದಸ್ಯರು ಅಭಿನಂದಿಸಿದ್ದಾರೆ

Share News

About BigTv News

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *