Breaking News

ಮಣಿಪುರ ರಾಜ್ಯದಲ್ಲಿನ ಹಿಂಸಾಚಾರ ಹಾಗೂ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ….

ಧಾರವಾಡ: ಮಣಿಪುರ ರಾಜ್ಯದಲ್ಲಿನ ಹಿಂಸಾಚಾರ ಹಾಗೂ ಅತ್ಯಾಚಾರ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಣಿಪುರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದ್ದು, ಗಲಭೆ, ಹಿಂಸಾಚಾರ ಹಾಗೂ ಅತ್ಯಾಚಾರ ಪ್ರಕರಣ ನಡೆಯುತ್ತಿದ್ದು ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಷ್ಟ್ರಪತಿಗಳು ಮಣಿಪುರ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ ಮಾಡಿದರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ರಂಗ ಪಂಚಮಿ ಸಂಭ್ರಮಕ್ಕೆ ಸಜ್ಜು: ಸಂಗೀತ, ಡಿಜೆ ಡ್ಯಾನ್ಸ್ ಕಾರ್ಯಕ್ರಮ…

ರಂಗ ಪಂಚಮಿ ಅಂಗವಾಗಿ ಸ್ನೇಹಿತರಿಗಾಗಿ ವಿಶೇಷ ಡ್ಯಾನ್ಸ್ ಕಾರ್ಯಕ್ರಮ ಹುಬ್ಬಳ್ಳಿ: ರಂಗ ಪಂಚಮಿ ಹಬ್ಬದ ಅಂಗವಾಗಿ ಮಾರ್ಚ್ 6 ರಂದು …

Leave a Reply

Your email address will not be published. Required fields are marked *