ಬೆಂಗಳೂರು: “ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಮರ್ಥನೆ ಮಾಡಿಕೊಳ್ಳುವ ಸಿದ್ದಕಲೆ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜ ಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ” ಎಂದು ತಿರುಗೇಟು ನೀಡಿದ್ದಾರೆ.
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿ ಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು” ಎಂದು ಟೀಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





