ವಿಜಯಪುರ: ಆಲಮಟ್ಟಿ ಎಡದಂಡೆ ಮುಖ್ಯಕಾಲುವೆ ಒಡೆದು ಅವಾಂತರ ಸೃಷ್ಟಿಸಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹರಿಂದ್ರಾಳ ಗ್ರಾಮದ ಬಳಿ ನಡೆದಿದೆ.

ಇನ್ನು ನೀರು ಜಮೀನಿಗೆ ನುಗ್ಗಿದ ಪರಿಣಾಮ 200 ಎಕರೆಗೂ ಹೆಚ್ಚಿನ ಪ್ರಮಾಣದ ಜಮೀನು ಜಲಾವೃತ ಆಗಿದೆ. ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಹಾನಿ ಆಗಿದೆ. ಸ್ಥಳಕ್ಕೆ ಕೆಬಿಜೆಎನ್‌ಎಲ್ ಆಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿ, ಕಾಲುವೆ ಒಡೆದ ಸ್ಥಳದಲ್ಲಿ ಜೆಸಿಬಿ ಮೂಲಕ ಮಣ್ಣು ಹಾಕಿ ಮುಚ್ಚಲು ಯತ್ನಿಸಿದ್ದಾರೆ. ಅಲ್ಲದೇ, ಕಾಲುವೆ ದುರಸ್ಥಿ ಮಾಡಬೇಕು,
ಜಮೀನಿಗೆ ನೀರು ನುಗ್ಗಿ ಹಾಳಾದ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





