ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಅನುಚಿತ ವರ್ತನೆ ತೋರಿದ್ದಾರೆ ಎಂದು ಎನ್‌ಡಿಎ ಸಂಸದೆಯರು ಕಿಡಿಕಾರಿದ್ದಾರೆ.
ಅಲ್ಲದೆ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಎನ್‌ಡಿಎ ಮಹಿಳಾ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಕೂಡ ಬರೆದಿದ್ದಾರೆ.

ಲೋಕಸಭೆ ಅಧಿವೇಶನದಲ್ಲಿಂದು ರಾಹುಲ್ ಗಾಂಧಿ ಭಾಗಿಯಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಸಂಸದರ ಹುದ್ದೆ ವಾಪಸ್ ಪಡೆದ ನಂತರ ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ರಾಹುಲ್ ಲೋಕಸಭೆ ಆವರಣದಿಂದ ಹೊರನಡೆಯುತ್ತಿದ್ದಾಗ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಷಣ ನಡೆಯುತ್ತಿರುವಾಗ ಫ್ಲೈಯಿಂಗ್ ಕಿಸ್ ನೀಡಿ ಹೊರನಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





