ಕಲಬುರಗಿ:ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ.
ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ ಪಟೇಲ್, ಹುಸೇನ್ ಪಾಷಾ, ಬಸು ರೆಡ್ಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





