Breaking News

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು…

ಮಂಡ್ಯ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಜಂಟಿ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಸಿಐಡಿ, ಐಜಿ ಪ್ರವೀಣ್‌ ಮಧುಕರ್‌ ಪವಾರ್‌ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿತ್ತು. ಜಂಟಿ ನಿರ್ದೇಶಕ ವಿ ಎಸ್‌ ಅಶೋಕ್‌ ಅವರೊಂದಿಗೆ ಸಿಐಡಿ ಅಧಿಕಾರಿಗಳು ಕೆಲ ಕಾಲ ಮಾತುಕತೆ ನಡೆಸಿದರು.

ನಂತರ ಪತ್ರ ಬರೆದಿದ್ದಾರೆ ಎನ್ನಲಾದ ಎಲ್ಲಾ ಏಳು ಸಹಾಯಕ ನಿರ್ದೇಶಕರ ಜೊತೆ ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ರಾಜ್ಯಪಾಲರ ಕಚೇರಿಗೆ ಬಂದಿರುವ ಪತ್ರ ಮೈಸೂರು ನಗರದ ಸರಸ್ವತಿ ಪುರಂ ಅಂಚೆ ಕಚೇರಿಯಿಂದ ಕಳುಹಿಸಲಾಗಿದೆ ಎಂಬ ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ಪರಿಶೀಲನೆಗೆ ತೆರಳಿದರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *