Breaking News

ಪ್ರಹ್ಲಾದ ಜೋಶಿ ಅವರಿಗೆ ಶಾಸಕ ಎನ್.ಎಚ್.ಕೋನರಡ್ಡಿ ಕಿವಿಮಾತು…

ಧಾರವಾಡ: ಲೋಕಸಭಾ ಚುನಾವಣೆಗೂ ಮುನ್ನ ಮಹದಾಯಿ ಯೋಜನೆಗೆ ಜಾರಿಗೊಳಿಸಿ ಅದರ ಕ್ರೆಡಿಟ್ ಬೇಕಾದರೆ ನೀವೇ ತೆಗೆದುಕೊಳ್ಳಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಶಾಸಕ ಎನ್.ಎಚ್.ಕೋನರಡ್ಡಿ ಕಿವಿಮಾತು ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಮಹದಾಯಿ ಹೋರಾಟಗಾರರು ನಮ್ಮ ವಿರುದ್ಧ ಹೋರಾಟ ಮಾಡಲು ನಾವು ಬೇಡ ಎಂದಿಲ್ಲ. ಈ ಯೋಜನೆಗೆ ಕೇಂದ್ರ ಸರ್ಕಾರ ಅರಣ್ಯ ಇಲಾಖೆಯಿಂದ ಅನುಮತಿ ಕೊಡಿಸಬೇಕಿದೆ. ಆ ಅನುಮತಿ ಸಿಕ್ಕರೆ ನಾಳೆಯೇ ಕಾಮಗಾರಿ ಆರಂಭವಾಗಲಿದೆ. ಹೋರಾಟಗಾರರು ನಮ್ಮ ವಿರುದ್ಧ ಹೋರಾಟ ಮಾಡುವುದೇ ಬೇಡ. ಆ ಯೋಜನೆ ಜಾರಿಯಾಗಬೇಕು ಎಂಬುದೇ ನಮ್ಮ ಉದ್ದೇಶ. ಅದರ ಬಗ್ಗೆ ನಿರಂತರವಾಗಿ ನಾನೂ ಹೋರಾಟ ಮಾಡುತ್ತ ಬಂದಿದ್ದೇನೆ ಎಂದರು.

ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಪ್ರಧಾನಿಗಳೊಂದಿಗೆ ಅತ್ಯುತ್ತಮ ಸಂಬಂಧ ಹೊಂದಿದ್ದಾರೆ. ಈ ಯೋಜನೆ ಜಾರಿಗೊಳಿಸುವುದು ಜೋಶಿ ಅವರಿಗೆ ದೊಡ್ಡ ಕೆಲಸವೇನಲ್ಲ. ರಾಜ್ಯದ ಅಭಿವೃದ್ಧಿ ಮತ್ತು ಅವರ ಲೋಕಸಭಾ ಕ್ಷೇತ್ರದ ಹಿತದೃಷ್ಟಿಯಿಂದ ಅವರು ಈ ಕೆಲಸ ಮಾಡಿಸಲಿ. ಆ ಎಲ್ಲಾ ಕೀರ್ತಿಯನ್ನು ಅವರೇ ಪಡೆದುಕೊಳ್ಳಲಿ. ಲೋಕಸಭಾ ಚುನಾವಣೆಗೂ ಮುನ್ನವೇ ಈ ಯೋಜನೆ ಅವರು ಜಾರಿಗೊಳಿಸಲಿ ಎಂದರು.

ಗೋವಾದವರ ಯಾವ ಅಪೀಲು ನಡೆಯುವುದಿಲ್ಲ. ಈಗಾಗಲೇ ಮಹದಾಯಿ ನ್ಯಾಯಾಧೀಕರಣದ ತೀರ್ಪು ನಮ್ಮ ಪರವಾಗಿ ಬಂದಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಅಧಿಸೂಚನೆ ಹೊರಡಿಸಲಾಗಿದೆ. ಡಿಪಿಆರ್ ಕೂಡ ಆಗಿದೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟ ನಂತರ ಕಾಮಗಾರಿ ಆರಂಭ ಆಗುವುದಷ್ಟೇ ಬಾಕಿ ಉಳಿದಿದೆ ಎಂದರು.

ಬಿಬಿಎಂಪಿಯಲ್ಲಿ ಕಮೀಷನ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದು ಈಗ 2 ತಿಂಗಳಾಗಿದೆಯಷ್ಟೆ. ಇನ್ನೂ ಯಾವ ಟೆಂಡರ್ ಕೂಡ ಕರೆದಿಲ್ಲ. ಬಿಜೆಪಿಯವರ ಇಂತಹ ಆರೋಪ ಎದುರಿಸಲು ನಾವು ಗಟ್ಟಿಯಾಗಿದ್ದೇವೆ. ಡಿಕೆಶಿ ಒಳ್ಳೆಯ ಕೆಲಸ ಮಾಡುತ್ತಿರುವುದು ಬಿಜೆಪಿಯವರಿಗೆ ಹೊಟ್ಟೆ ಕಿಚ್ಚು ತರಿಸಿದೆ. ಬ್ಯಾಂಡ್ ಬೆಂಗಳೂರು ಮಾಡುತ್ತಿರುವುದರಿಂದ ಅದನ್ನು ಸಹಿಸಲಾರದೇ ಈ ರೀತಿಯ ಆರೋಪ ಮಾಡುತ್ತಿದ್ದಾರೆ.

ಕೃಷಿ ಸಚಿವ ಚೆಲುವರಾಯಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು. ಅದು ತೊಟ್ಟಿ ಪತ್ರ ಎಂದು ಕೃಷಿ ಅಧಿಕಾರಿಗಳೇ ಹೇಳಿದ್ದಾರೆ ಎಂದರು.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *