ಬೆಂಗಳೂರು, ಕೆಲವು ದಿನಗಳಿಂದ ಭಾರೀ ದುಭಾರಿಯಾಗಿದ್ದ ಟೊಮೆಟೋ ಬೆಲೆ ಇದೀಗ ದಿಢೀರ್ ಅಗಿ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ.
ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದ್ದು, 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ.
ಇನ್ನು ಮಳೆ ಇದ್ದ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮೆಟೋ ಸರಬರಾಜು ಆಗದ ಕಾರಣ ಬೆಲೆ ಜಾಸ್ತಿ ಆಗಿತ್ತು. ಮಳೆ ನಿಂತ ಕಾರಣ ಇದೀಗ ಟೊಮೆಟೋ ಸರಬರಾಜು ಆಗುತ್ತಿದ್ದು, ಇದೀಗ ದಿಢೀರ್ ಅಗಿ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





