ಬೆಂಗಳೂರು: ಪ್ರಕರಣವೊಂದರ ಭಾಗವಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಬೆಂಗಳೂರಿನಲ್ಲಿ ಶೋಧ ನಡೆಸಿದಾಗ ಸೆರೆಸಿಕ್ಕ ಬಾಂಗ್ಲಾದೇಶದ ಆರೋಪಿಯೊಬ್ಬ 42 ಜನ ಇತರೆ ಬಾಂಗ್ಲಾ ಮೂಲದ ವ್ಯಕ್ತಿಗಳನ್ನೂ ಅಕ್ರಮವಾಗಿ ಭಾರತಕ್ಕೆ ಬಂದು ನೆಲೆಸಲು ನೆರವು ನೀಡಿರುವುದು ತಿಳಿದು ಬಂದಿದೆ.
ಬೆಳ್ಳಂದೂರು ಪೊಲೀಸರ ವಶದಲ್ಲಿರುವ ಅಬ್ದುಲ್ ಖಾದಿರ್ ತಾಲೂಕ್ದಾರ್ ಎಂಬಾತನ ನೆರವಿನಿಂದ ಮೊಹಮ್ಮದ್ ಜಾಹೀದ್, ಖಲೀಲ್ ಚಪ್ರಾಸಿ ಸೇರಿ ಕನಿಷ್ಠ 40 ಜನ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಸೆಕ್ಯೂರಿಟಿ, ಹೌಸ್ ಕೀಪಿಂಗ್, ಕೂಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಭಾರತೀಯ ಸೇನೆಯ ಮಾಹಿತಿ ಪಡೆಯಲು ಪಾಕಿಸ್ತಾನದ ಗುಪ್ತಚರ ಇಲಾಖೆ ಸಂಚು ರೂಪಿಸಿರುವ ಕುರಿತು 2021ರಲ್ಲಿ ಎನ್ಐಎ ಲಕ್ನೋ ಘಟಕ ಪ್ರಕರಣ ದಾಖಲಿಸಿಕೊಂಡಿತ್ತು. ಈ ಪ್ರಕರಣದ ತನಿಖೆಯ ವೇಳೆ ಬೆಂಗಳೂರಿಗೆ ಭೇಟಿ ನೀಡಿದ್ದ ಅಧಿಕಾರಿಗಳು ಆಗಸ್ಟ್ 7ರಂದು ಖಲೀಲ್ ಚಪ್ರಾಸಿಯನ್ನು ವಶಕ್ಕೆ ಪಡೆದಿದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news





