Breaking News

ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ 6 ತಿಂಗಳ ಜೈಲು ಶಿಕ್ಷೆ…

ತಮಿಳುನಾಡು: ಚೆನ್ನೈ ಎಗ್ಮೋರ್ ನ್ಯಾಯಾಲಯ ಖ್ಯಾತ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಜಯಪ್ರದಾ ನಡೆಸುತ್ತಿದ್ದ ಚಿತ್ರಮಂದಿರದಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ ಇಎಸ್‌ಐ ಹಣ ಪಾವತಿಸಿಲ್ಲ ಎಂದು ಕಾರ್ಮಿಕರು ರಾಜ್ಯ ವಿಮಾ ನಿಗಮಕ್ಕೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜಯಪ್ರದಾ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಈಗ ತೀರ್ಪು ಪ್ರಕಟವಾಗಿದ್ದು, ಚೆನ್ನೈ ಎಗ್ಮೋರ್​ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಜಯಪ್ರದಾ ಅವರು ಚೆನ್ನೈನ ರಾಯಪೇಟಾದಲ್ಲಿ ಚಿತ್ರಮಂದಿರ ಹೊಂದಿದ್ದಾರೆ. ಚೆನ್ನೈನ ರಾಮ್ ಕುಮಾರ್ ಅಣ್ಣಾ ರಸ್ತೆಯಲ್ಲಿ ರಾಜಬಾಬು ಜತೆ ಸೇರಿ ಚಿತ್ರಮಂದಿರ ನಡೆಸುತ್ತಿದ್ದರು. ಸಿನಿಮಾ ಥಿಯೇಟರ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರು ಇಎಸ್‌ಐ ಮೊತ್ತ ಪಾವತಿಸಿಲ್ಲ ಎಂದು ಆರೋಪಿಸಿ ಎಗ್ಮೋರ್ ನ್ಯಾಯಾಲಯದ ಮೊರೆ ಹೋಗಿದ್ದರು

ಕಾರ್ಮಿಕ ಸರ್ಕಾರಿ ವಿಮಾ ನಿಗಮವು ಚೆನ್ನೈನ ಎಗ್ಮೋರ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಜಯಪ್ರದಾ ಸೇರಿದಂತೆ ಮೂವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಪರಿಶೀಲಿಸಿದ ಚೆನ್ನೈ ಎಗ್ಮೋರ್ ಕೋರ್ಟ್ ಜಯಪ್ರದಾ ಮತ್ತು ಇತರ ಮೂವರಿಗೆ ಆರು ತಿಂಗಳ ಶಿಕ್ಷೆ ವಿಧಿಸಿದೆ

Share News

About BigTv News

Check Also

ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ: ಮುಖ್ಯಮಂತ್ರಿ ಚಂದ್ರು.

ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು …

Leave a Reply

Your email address will not be published. Required fields are marked *

You cannot copy content of this page