Breaking News

ಬಸವನಗೌಡ ಪಾಟೀಲ್ ಯತ್ನಾಳ್ ಅವರೇ ವಿರೋಧ ಪಕ್ಷದ ನಾಯಕ: ಡಾ.ಯಶವಂತ ಗುರೂಜಿ..

ತುಮಕೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಯಾರೆಂದು ಇನ್ನೂ ಅಂತಿಮವಾಗಿಲ್ಲ. ಇದರ ನಡುವೆಯೇ ನೊಣವಿನಕೆರೆಯ ಕಾಲಜ್ಞಾನಿ ಡಾ.ಯಶವಂತ ಗುರೂಜಿ ಅವರು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರೇ ವಿರೋಧ ಪಕ್ಷದ ನಾಯಕ ಎಂದು ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಮಾತನಾಡಿರುವ ಗುರೂಜಿ, ಗ್ರಹ-ಗತಿಗಳ ಬಲಾಬಲಗಳನ್ನ ತಾಳೆ ಹಾಕಿ ನೋಡಿದ್ರೆ ಯತ್ನಾಳ್ ಅವರೇ ವಿರೋಧ ಪಕ್ಷದ ನಾಯಕ. ಯತ್ನಾಳ್‌ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ‌ವನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಂಬರುವ ಅಮಾವಾಸ್ಯೆ ಬಳಿಕ ತಕ್ಷಣವೇ ಯತ್ನಾಳ್ ವಿರೋಧ ಪಕ್ಷದ ನಾಯಕ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ವಿರೋಧ ಪಕ್ಷದ ನಾಯಕ ಯಾರು ಆಗ್ತಾರೆ ಎಂದು ಕೆಲವರು ನನ್ನನ್ನು ಕೇಳಿದ್ರು. ಎಲ್ಲಾ ನಾಯಕರ ಜಾತಕಗಳ ಬಲಾಬಲಗಳನ್ನ ತಾಳೆ ಹಾಕಿ, ವಿಮರ್ಶೆ ಮಾಡಿ ನೋಡಲಾಗಿದೆ. ಹಿಂದೂ ಹುಲಿ ಎಂದು ಕರೆಸಿಕೊಳ್ಳೋ ಯತ್ನಾಳ್ ಅವರೇ ವಿರೋಧ ಪಕ್ಷದ ನಾಯಕ ಆಗ್ತಾರೆ. ಇದು ಕಾಲಜ್ಞಾನ ಭವಿಷ್ಯ ವಾಣಿ ಹೇಳುತ್ತಿರುವುದು ಎಂದರು.

ಖಂಡಿತವಾಗಿಯೂ ಯತ್ನಾಳ್‌ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಪ್ರಾಪ್ತಿ ಆಗುತ್ತೆ. ಶಕ್ತಿಗಿಂತ ಗ್ರಹಗತಿಗಳ ಬಲಾಬಲಗಳ ಆಧಾರದ ಮೇಲೆ ಯತ್ನಾಳ್‌ಗೆ ಆ ಯೋಗ ಇದೆ ಎಂದೂ ಹೇಳಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *