Breaking News

ಗುಜರಾತ್​ ಹೈಕೋರ್ಟ್​ ನ್ಯಾಯಮೂರ್ತಿಯನ್ನು ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ ಮಾಡಲು ಶಿಫಾರಸು….

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್​ ಹೈಕೋರ್ಟ್​ ನ್ಯಾಯಮೂರ್ತಿ ಎಚ್​ ಎಂ ಪ್ರಚ್ಚಕ್​ ಅವರನ್ನು ‘ಉತ್ತಮ ನ್ಯಾಯ ನಿರ್ವಹಣೆ’ಗಾಗಿ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ ಮಾಡಲು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್​, ನೇತೃತ್ವದ ಸುಪ್ರೀಂ ಕೋರ್ಟ್​ ಕೊಲಿಜಿಯಂ ಶಿಫಾರಸು ಮಾಡಿದೆ.

2019 ರಲ್ಲಿ ನಡೆದ ರಾಜಕೀಯ ರ‍್ಯಾಲಿಯಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದ ಕುರಿತು ಗುಜರಾತ್​ನ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಅವರು ಸಲ್ಲಿಸಿದ್ದ ಕ್ರಿಮಿನಲ್​ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ವಿಧಿಸಿದ್ದ ಎರಡು ವರ್ಷಗಳ ಶಿಕ್ಷೆಯನ್ನು ತಡೆಯಲು ನ್ಯಾಯಮೂರ್ತಿ ಪ್ರಚ್ಚಕ್​ ನಿರಾಕರಿಸಿದ್ದರು. ಗುಜರಾತ್​ ಹೈಕೋರ್ಟ್​ನಲ್ಲಿ ರಿಲೀಫ್​ ಸಿಗದ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿ, ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂಕೋರ್ಟ್​​ನಲ್ಲಿ, ನ್ಯಾಯಮೂರ್ತಿ ಬಿ ಆರ್​ ಗವಾಯಿ ಅವರ ನೇತೃತ್ವದ ಪೀಠ ರಾಹುಲ್​ ಗಾಂಧಿ ಅವರಿಗೆ ವಿಧಿಸಿದ್ದ ಶಿಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದರು.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *