Breaking News

ಕೆಲಸದ ಒತ್ತಡದಿಂದ ಇನ್ನೊಬ್ಬ ಪೊಲೀಸ್ ಪೇದೆ ಸಾವು..

ರಾಯಚೂರು:ಪೊಲೀಸ್ ಕಾನ್​ಸ್ಟೇಬಲ್​​ವೊಬ್ಬರು ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಇಂದು ನಡೆದಿದೆ. ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಗುರುವಾರ ರಾತ್ರಿ ಘಟನೆ ಜರುಗಿದೆ. ಬಸವನಗೌಡ ಆಗೋಲಿ (34) ಮೃತರು.

ಇವರು ಮಸ್ಕಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಮನೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *