Breaking News

ಮಹಿಳೆಯೊಬ್ಬರು ತಮ್ಮ ಗಾರ್ಮೆಂಟ್ಸ್ ನಲ್ಲಿ ನೇಣು ಬಿಗಿದುಕೊಂಡು ಸಾವು….

ಹುಬ್ಬಳ್ಳಿ: ಗಾರ್ಮೆಂಟ್ ನಡೆಸುವ ಮೂಲಕ ಸುಮಾರು ಕುಟುಂಬಕ್ಕೆ ಕೆಲಸ ನೀಡಿದ್ದ ಮಹಿಳೆಯೊಬ್ಬರು ತಮ್ಮ ಗಾರ್ಮೆಂಟ್ ನಲ್ಲೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ನವನಗರದಲ್ಲಿರುವ ಐಶ್ವರ್ಯ ಗಾರ್ಮೆಂಟ್ಸ್ ನಲ್ಲಿ ನಡೆದಿದೆ.

ಗಾರ್ಮೆಂಟ್ ಮಾಲೀಕರಾದ ಪ್ರಿಯಾ ಬೊಂಗಲೆ ಅನ್ನೋ ಮಹಿಳೆ ನೇಣಿಗೆ ಶರಣಾಗಿದ್ದಾರೆ. ಗಾರ್ಮೆಂಟ್ಸ್ ನಡೆಸುತ್ತಿದ್ದ ಮಹಿಳೆ ನೇಣಿಗೆ ಶರಣಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮೃತ ಮಹಿಳೆಗೆ ಮದುವೆ ಆಗಿದ್ದು, ಅವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡದ್ದಿದ್ದಾರೆ. ನವನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹಣಕಾಸಿನ ವಿಚಾರದಲ್ಲಿ ಘಟನೆ ಸಂಭವಿಸಿದೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಪೊಲೀಸ್ ತನಿಖೆ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Share News

About Shaikh BigTv

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *