ಧಾರವಾಡದ ನಗರದ ಜನಸಂದಣಿ ಇರುವ ಪ್ರದೇಶದಲ್ಲಿ ಹಾಡಹಗಲೇ ಮೂವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾರೆ.ಧಾರವಾಡದ ಎಲ್‌ಐಸಿ ಬಳಿ ಈ ಘಟನೆ ನಡೆದಿದೆ. ಕಿರಣ್, ಆಸೀಫ್ ಹಾಗೂ ಶಾನವಾಜ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಯುವತಿ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಕು

ಇರಿದವರು ಅಲ್ಲಿಂದ ಪರಾರಿಯಾಗಿದ್ದಾರೆ . ಗೆಳೆಯನ ಸ್ನೇಹಿತೆಯ ವಿಚಾರವಾಗಿ ಜಗಳ ನಡೆದು ಕೊನೆಗೆ ಮೂವರ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.ಜಿಲ್ಲಾಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಿ ಬಳಿಕ ಮೂವರೂ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ಆಸ್ಪತ್ರೆಗೆ ರವಾನಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news




