ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಶ್ರೀ ಕ್ಷೇತ್ರ ಬೂದನಗುಡ್ಡ ಬಸವಣ್ಣ ದೇವಸ್ಥಾನದಲ್ಲಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಶ್ರೀ ಕ್ಷೇತ್ರ ಬೂದನಗುಡ್ಡ ಬಸವಣ್ಣ ದೇವಸ್ಥಾನ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.
ಶ್ರೀ ಕ್ಷೇತ್ರ ಬೂದನಗುಡ್ಡವು ಪುರಾತನವಾದ ರಮಣೀಯವಾದ ಉನ್ನತ ಗಿರಿ ಶಿಖರ ವನಸಿರಿಗಳಿಂದ ಕೂಡಿದ ಪ್ರವಾಸಿ ತಾಣವಾಗಿದ್ದು, ಶ್ರೀ ಕ್ಷೇತ್ರ ಉಳಿವಿಯ ಹೆಬ್ಬಾಗಿಲು ಎಂದೇ ಪ್ರಖ್ಯಾತಿ ಪಡೆದಿದೆ.
ಈ ನಿಟ್ಟಿನಲ್ಲಿ ಪ್ರತಿ ಶ್ರಾವಣ ಮಾಸದಂದು ಪ್ರತಿ ಸೋಮವಾರ ಹಾಗೂ ಗುರುವಾರ ಒಂದು ತಿಂಗಳ ಕಾಲ ಜಾತ್ರಾಮಹೋತ್ಸವ ನಡೆಯುತ್ತದೆ. ದೇವಸ್ಥಾನದ ಹೆಚ್ಚಿನ ಅಭಿವೃದ್ಧಿ ಉಳಿದಿರುವುದರಿಂದ ಶ್ರೀ ಕ್ಷೇತ್ರ ಬೂದನಗುಡ್ಡಕ್ಕೆ ಬರುವ ಭಕ್ತಾದಿಗಳಿಗೆ ಅಗತ್ಯ ಸೌಕರ್ಯಗಳಿಲ್ಲದೇ ತೊಂದರೆ ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳನ್ನು ತುರ್ತಾಗಿ ಈಡೇರಿಸಬೇಕು ಎಂದು(ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅವರ ಪ್ರತಿನಿಧಿಯವರಿಗೆ) ಕೋರಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬೂದನಗುಡ್ಡ ಬಸವಣ್ಣ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಈರಪ್ಪ ಕೆ ಎಮ್ಮಿ, ಮಂಜುನಾಥ ಲೂತಿಮಠ, ಮಹಾಂತೇಶ ಗಿರಿಮಠ, ಮಹಾಂತೇಶ ಹಾದಿಮನಿ, ಸುರೇಶ್ ಧ್ಯಾಮಣ್ಣವರ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





