Breaking News

ಧಾರವಾಡ ಕಾರು ಪಲ್ಟಿಯಾಗಿ ಇಬ್ಬರ ಸಾವು

ಧಾರವಾಡ: ಧಾರವಾಡ ಬೆಳಗಾವಿ ಬೈಪಾಸ್ ರಸ್ತೆಯಲ್ಲಿ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಜನ ಸಾವನ್ನಪ್ಪುತ್ತಲೇ ಇದ್ದಾರೆ. ಮೊನ್ನೆಯಷ್ಟೇ ಬೈಕ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಕಾರು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ಎಂಬುವರೇ ಈ ಘಟನೆಯಲ್ಲಿ ಸಾವನ್ನಪ್ಪಿದವರು. ಊಟ ಮಾಡಿಕೊಂಡು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ
ಅಸುನೀಗಿದ್ದಾನೆ.

ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *