Breaking News

ಜಾತಿ ನಿಂದನೆ ಕೇಸ್ : ಪೊಲೀಸ್‌ ಎದುರು ವಿಚಾರಣೆಗೆ ಹಾಜರಾದ ಉಪೇಂದ್ರ

ಬೆಂಗಳೂರು : ದಲಿತ ಸಮುದಾಯದ ಬಗ್ಗೆಆಕ್ಷೇಪಾರ್ಹ ಪದ ಬಳಕೆ ಮಾಡಿರುವ ನಟ ಹಾಗೂ ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಅವರಿಗೆ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಉಪೇಂದ್ರ ಚೆನ್ನಮ್ಮನ ಅಚ್ಚುಕಟ್ಟೆ ಪೋಲಿಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಕಳೆದ ಭಾನುವಾರವಷ್ಟೇ ಕತ್ರಿಗುಪ್ಪೆಯಲ್ಲಿರುವ ಅವರ ಮನೆಯಲ್ಲಿ ಮಹಜರು ಪ್ರಕ್ರಿಯೆ ಮುಗಿಸಿರುವ ಪೊಲೀಸರು, ಬಳಿಕ ವಿಚಾರಣೆಗೆ ಹಾಜರಾಗುವಂತೆ ವಾಟ್ಸಾಪ್ ಮೂಲಕ ಪೊಲೀಸರು ನೋಟಿಸ್ ನೀಡಿದ್ದರು.

ವಿ ವಿ ಪುರಂ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಯನ್ನು ನಡೆಸಲು ಇಲಾಖೆ ಸೂಚಿಸಿದ್ದು, ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾದ ಎರಡನೇಯ ಪ್ರಕರಣವು ಇಂದು ಚೆನ್ನಮ್ಮನ ಅಚ್ಚುಕಟ್ಟು ಠಾಣೆಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *