Breaking News

ತಾಲೂಕಿನ ಕೊಟಗೊಂಡಹುಣಸಿ ಗ್ರಾಮದಲ್ಲಿ 77 ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಣೆ..

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಮಂದಾಕಿನಿ ಪಟರ್ವಧನ ಅವರ ನೇತೃತ್ವದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರಗೌಡ ಹೊನ್ನಪ್ಪಗೌಡ್ರ ಅವರು ಧ್ವಜಾರೋಹಣ ನೇರವೇರಿಸಿದರೇ, ಇವರಿಗೆ ಶಾಲೆಯ ಸಹಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಗುರು ಹಿರಿಯರು, ಶಾಲೆಯ ಮಕ್ಕಳು ಸಾಥ್ ಕೊಟ್ಟರು. ಬಳಿಕ ಗ್ರಾಮದಲ್ಲಿ ಶಾಲಾ ಮಕ್ಕಳು ಪ್ರಭಾತ್ ಪ್ರೇರಿ ನಡೆಸಿ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಸ್ವಾತಂತ್ರ್ಯ ಯೋಧರ ಬಗ್ಗೆ ಜಾಗೃತಿ ಮೂಡಿಸಿದರು.

ಯುವಕ ಮಂಡಳದಲ್ಲಿ ಸ್ವಾತಂತ್ರ್ಯ ದಿನಾಚರಣೆ ಗ್ರಾಮದ ಹೃದಯ ಭಾಗದಲ್ಲಿರುವ ಯುವಕ ಮಂಡಳದ ಹತ್ತಿರ ಗ್ರಾಮದ ವತಿಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತಿ ಸದಸ್ಯರುಗಳು ನೆರವೇರಿಸಿದರು. ಬಳಿಕ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅಂಗಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದ ಹತ್ತಿರದ ಅಂಗನವಾಡಿ ಕೇಂದ್ರ- 2 ರಲ್ಲಿ ಶಿಕ್ಷಕಿ ಶಾಂತವ್ವ ಯಲಿವಾಳ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಧ್ವಜಾರೋಹಣವನ್ನು ಗ್ರಾಮದ ಮುಖಂಡರು ನೆರವೇರಿಸಿದರು. ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮುಕ್ತುಂಹುಸೇನ ಬಡಿಗೇರ್, ಸದಸ್ಯರಾದ ಯಲ್ಲಪ್ಪಗೌಡ ಸಣ್ಣಪರ್ವತಗೌಡ್ರ, ಬಸಕ್ಕ ಮಾಳಗಿ, ದಿವಾನಸಾಬ್ ಕಮಲಸಾಬನವರ, ಹೊನ್ನಪ್ಪ ಸೋಲಾರಗೊಪ್ಪ, ಶೀತಲ ಬಿಜವಾಡ, ಮುಖಂಡರಾದ ನಿಂಗಪ್ಪ ಯಲಿವಾಳ, ಅಶೋಕ ಸೋಲಾರಗೊಪ್ಪ, ಯಲ್ಲಪ್ಪ ಸೋಲಾರಗೊಪ್ಪ, ಗುರುನಾಥ ಹರಿಜನ, ಸುರೇಶ ಸೋಲಾರಗೊಪ್ಪ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸುಜಾತಾ ರಂಗಣ್ಣವರ, ಶಾಲೆಯ ಶಿಕ್ಷಕರಾದ ಎಸ್.ಎಸ್.ಮಿಕಲಿ, ಬಿ.ಎಸ್.ಹಾವೇರಿ, ವಿ.ಕೆ.ದಾಸರ, ಬಿ.ಎಸ್.ಬಸರಕೋಡ, ವಿ.ಎಸ್.ಪಟ್ಟಣಶೆಟ್ಡಿ, ಗಿರಿಜಾ ನಾಯ್ಕ, ವಿದ್ಯಾ ಹಲ್ಕುರ್ಕಿ, ಅಂಗನವಾಡಿ ಶಿಕ್ಷಕಿ ಸಾವಿತ್ರಿ ಪಾಟೀಲ್, ಶ್ವೇತಾ ಹರ್ತಿ, ಶೃತಿ ಹೊನ್ನಪ್ಪಗೌಡ್ರ, ಮಂಜುನಾಥ ರಂಗಣ್ಣನವರ ಸೇರಿದಂತೆ ಗ್ರಾಮದ ಗುರು ಹಿರಿಯರು ಸೇರಿದಂತೆ ಶಾಲೆಯ ಮಕ್ಕಳು ಉಪಸ್ಥಿತರಿದ್ದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *