ಚಾಮರಾಜನಗರ: ಶ್ರೀಲಂಕಾದ ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗುತ್ತಿದ್ದಾರೆ. ತಮ್ಮ ಉದ್ಯಮವನ್ನು ಕರ್ನಾಟದ ಚಾಮರಾಜನಗರದಲ್ಲಿ ಆರಂಭಿಸುತ್ತಿದ್ದಾರೆ. ಇಲ್ಲಿ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದ್ದಾರೆ ಲಂಕಾ ಕ್ರಿಕೆಟಿಗ.
ಹೌದು…, ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್ ಕಾರ್ಖಾನೆಯನ್ನು ಆರಂಭಿಸುತ್ತಿದ್ದು, 46 ಎಕರೆ ಪ್ರದೇಶವನ್ನು ಖರೀದಿಸಿದ್ದಾರೆ. ಸರ್ಕಾರದಿಂದ ಪಡೆಯಬೇಕಾದ ಆಡಳಿತಾತ್ಮಕವಾದ ಎಲ್ಲಾ ಹಂತಗಳನ್ನೂ ಮುಗಿಸಿ ಕಾರ್ಖಾನೆಯ ನಿರ್ಮಾಣದ ಕಾರ್ಯ ಆರಂಭಿಸಿದ್ದಾರೆ. ಮುತ್ತಯ್ಯ ಬೆವರೇಜಸ್ ಹೆಸರಿನಲ್ಲಿ ಸಾಫ್ಟ್ ಡ್ರಿಂಕ್, ಕೂಲ್ ಡ್ರಿಂಕ್, ಸುವಾಸಿತ ಹಾಲನ್ನು ಕ್ಯಾನ್ಗಳಲ್ಲಿ ಮಾರಾಟ ಮಾಡಲಿದ್ದು ಚಾಮರಾಜನಗರದಲ್ಲಿ ಸಾಪ್ಟ್ ಡ್ರಿಂಕ್ ಹಾಗೂ ನಾನ್ ಆಲ್ಕೊಹಾಲಿಕ್ ಡ್ರಿಂಕ್ಗಳು ತಯಾರಾಗಲಿದೆ ಎಂದು ತಿಳಿದು ಬಂದಿದೆ.
250 ಕೋಟಿಗೂ ಅಧಿಕ ಮೊತ್ತದ ಹಣವನ್ನು ಚಾಮರಾಜನಗರದಲ್ಲಿ ಹೂಡಿಕೆ ಮಾಡುತ್ತಿದ್ದು ಸ್ಥಳೀಯವಾಗಿ 500 – 800 ಮಂದಿಗೆ ನೌಕರಿ ಸಿಗಲಿದೆ, ಪರೋಕ್ಷವಾಗಿ ನೂರಾರು ಮಂದಿ ಕಾರ್ಖಾನೆಯಿಂದ ಸಹಾಯವಾಗಾಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





