Breaking News

ಕಪಿಲೇಶ್ವರ ಮಂದಿರದ ಆವರಣದ ಹೊಂಡದಲ್ಲಿ ಬೆಳ್ಳಂ ಬೆಳಗ್ಗೆ ಅಪರಿಚಿತ ಜೋಡಿ ಶವಗಳು ಪತ್ತೆ…

ಬೆಳಗಾವಿ:ಇಲ್ಲಿನ ಕಪಿಲೇಶ್ವರ ಮಂದಿರದ ಆವರಣದ ಹೊಂಡದಲ್ಲಿ ಬೆಳ್ಳಂ ಬೆಳಗ್ಗೆ ಅಪರಿಚಿತ ಜೋಡಿ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಘಟನೆಯಿಂದ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಒಂದು ಪುರುಷ ಶವವಾಗಿದ್ದು, ಮತ್ತೊಂದು ಮಹಿಳೆಯದ್ದಾಗಿದೆ. ಬೆಳಗ್ಗೆ ಇಲ್ಲಿ ವಾಕಿಂಗ್ ಮಾಡುತ್ತಿದ್ದ ಸ್ಥಳೀಯರು ಹೊಂಡದಲ್ಲಿ ಎರಡು ಹೆಣಗಳು ತೇಲುತ್ತಿರುವುದನ್ನು ಗಮನಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವಗಳು ಗುರುತು ಇನ್ನೂ ಪತ್ತೆಯಾಗಿಲ್ಲ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಶವಗಳನ್ನು ಹೊಂಡದಿಂದ ಮೇಲಕ್ಕೆ ತೆಗೆಯಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಪಿಲೇಶ್ವರ ಹೊಂಡದ ಸುತ್ತಮುತ್ತ ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರಾ?, ಇಲ್ಲವೇ ಯಾರಾದರೂ ಕೊಲೆ ಮಾಡಿ ಶವಗಳನ್ನು ಹೊಂಡದಲ್ಲಿ ಬಿಸಾಕಿ ಹೋಗಿದ್ದಾರಾ? ಎಂಬ ಬಗ್ಗೆ ಅನುಮಾನ ಮೂಡಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *