Breaking News

ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು: ಬೋಸರಾಜು.

ಮಡಿಕೇರಿ : ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು.

ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ‘ಉಚಿತ ಬೆಳಕು, ಸುಸ್ಥಿರ ಬದುಕು’ ಕಾರ್ಯಕ್ರಮದಡಿ ಶೂನ್ಯ ವಿದ್ಯುತ್ ಬಿಲ್ಲು ನೀಡುವ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, “ರಾಜ್ಯ ಮತ್ತು ರಾಷ್ಟ್ರ ಅಭಿವೃದ್ಧಿ ಹೊಂದಲು ಎಲ್ಲ ಜಾತಿ, ಉಪ ಜಾತಿ, ಧರ್ಮದ ಜನರ ಜೀವನ ಮಟ್ಟ ಸುಧಾರಣೆ ಆಗಬೇಕು. ಆಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಬಡ ಜನರ ಕಲ್ಯಾಣಕ್ಕಾಗಿ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ 4 ಯೋಜನೆಗಳನ್ನು ಈಗಾಗಲೇ ಕಾರ್ಯರೂಪಕ್ಕೆ ತಂದಿದೆ” ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 1.30 ಲಕ್ಷ ಜನ ಹೆಸರು ನೋಂದಾಯಿಸಿದ್ದಾರೆ. 2.90 ಕೋಟಿ ರೂ. ಅನ್ನು ಸರ್ಕಾರ ಭರಿಸಿದೆ. ಗೃಹ ಜ್ಯೋತಿ ಜೊತೆಗೆ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ ಹೀಗೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ವಾರ್ಷಿಕ 60 ಸಾವಿರ ಕೋಟಿ ರೂ. ಭರಿಸುತ್ತದೆ. ಡಿಸೆಂಬರ್ ವೇಳೆಗೆ ಎಲ್ಲ ಯೋಜನೆಗಳು ಜಾರಿಗೊಳ್ಳಲಿವೆ ಎಂದು ತಿಳಿಸಿದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *