ಸುಳ್ಯ: ಕೇರಳದ ಗಡಿ ಪ್ರದೇಶವಾದ ಬದಿಯಡ್ಕದ ಎಲಿಜಬೆತ್ ವರ್ಗೀಸ್ಗೆ ಅಮೆರಿಕದಿಂದ 2.5 ಕೋಟಿ ರೂಪಾಯಿಯ ಫೆಲೋಶಿಪ್ ಲಭ್ಯವಾಗಿದೆ. ಅಮೆರಿಕದ ಸ್ಟಿಲ್ವಾಟರ್ ಒಕ್ಲಹೋಮ ಸ್ಟೇಟ್ ಯೂನಿವರ್ಸಿಟಿಯಿಂದ 5 ವರ್ಷಗಳ ಸಂಶೋಧನೆಗಾಗಿ ಬದಿಯಡ್ಕದ ಚುಳ್ಳಿಕಾನ ನಿವಾಸಿ ಎಲಿಜಬೆತ್ ಅವರಿಗೆ ಪಶುವೈದ್ಯಕೀಯ ರೋಗಶಾಸ್ತ್ರದಲ್ಲಿ ಸಂಶೋಧನೆ ನಡೆಸುವುದಕ್ಕಾಗಿ ಈ 2.5 ಕೋಟಿ ರೂಪಾಯಿಯ ಫೆಲೋಶಿಪ್ ಲಭ್ಯವಾಗಿದೆ.
ಎಲಿಜಬೆತ್ ಅವರು ಚೆನ್ನೈನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರಜ್ಞರಾಗಿದ್ದಾರೆ. ಎಲಿಜಬೆತ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮಿಳುನಾಡಿನಲ್ಲಿ ಪಡೆದು ನಂತರದ ಶಿಕ್ಷಣವನ್ನು ಗೋರಕ್‌ಪುರದಲ್ಲಿ ಪಡೆದಿದ್ದಾರೆ. ಇವರು ಭಾಷಣ ಕಲೆಯಲ್ಲಿ ಮತ್ತು ಬರವಣಿಗೆಯಲ್ಲಿ ನೈಪುಣ್ಯತೆ ಪಡೆದಿದ್ದು, ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡ ಹಿರಿಮೆ ಹೊಂದಿದ್ದಾರೆ. ಎಲಿಜಬೆತ್ ಅವರು ಮದ್ರಾಸ್ ಪಶುವೈದ್ಯಕೀಯ ಕಾಲೇಜಿನಲ್ಲಿ ಪದವಿ ಮತ್ತು ಪೂಕೋಡ್‌ನ ವೆಟರ್ನರಿ ಕಾಲೇಜಿನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





