ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ.
ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ ಹೆಚ್ಚು ಕಡೆಗಳಲ್ಲಿ 250ಕ್ಕೂ ಅಧಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದರು. ಕಳೆದ ಕೆಲವು ದಿನಗಳಿಂದ ಬಂದ ದೂರುಗಳನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನ ಮಹದೇವಪುರ ವಲಯದ ಕಂದಾಯ ನಿರೀಕ್ಷಕ ಎಸ್.ನಟರಾಜ್ ಅವರಿಗೆ ಸೇರಿದ 4 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಎಂ.ಎಸ್.ಬಿಲ್ಡಿಂಗ್ ಕಚೇರಿಯ ಗ್ರೇಡ್-1 ತಹಶೀಲ್ದಾರ್ ಆಗಿರುವ ಶಿವರಾಜು ಅವರಿಗೆ ಸೇರಿದ 12 ಸ್ಥಳಗಳ ಮೇಲೆ, ಬೆಂಗಳೂರಿನ ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ ಅವರಿಗೆ ಸೇರಿದ 6 ಸ್ಥಳಗಳು, ಬಿಬಿಎಂಪಿ ಕಾರ್ಯನಿರ್ವಾಕ ಇಂಜಿನಿಯರ್ (ಇಇ) ಎಸ್.ಭಾರತಿ ಅವರಿಗೆ ಸೇರಿದ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





