Breaking News

ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ನ್ಯಾಯಾಲಯದ ಆದೇಶ ಗೌರವಿಸಿ, ಅದನ್ನು ಪಾಲಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಮಜಾಯಿಷಿ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಮ್ಮ ರೈತರ ಹಿತವನ್ನು ಕಾಯಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದೇವೆ. ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು” ಎಂದರು.

ಅಲ್ಲದೇ, “ಈ ಹಿಂದೆ ಇದ್ದ ಸರ್ಕಾರಗಳು ನ್ಯಾಯಾಲಯದ ಆದೇಶಗಳನ್ನು ಇದೇ ರೀತಿ ಪಾಲಿಸಿವೆ. ನೀರು ಬಿಡುಗಡೆ ಮಾಡಿವೆ. ಆದರೆ, ನಮ್ಮ ರೈತರ ಹಿತ ಕಾಪಾಡುವುದು ನಮ್ಮ ಮೇಲಿರುವ ದೊಡ್ಡ ಜವಾಬ್ದಾರಿ. ನೀರು ಬಿಟ್ಟಿರುವುದನ್ನು ಪ್ರಶ್ನಿಸಿ ವಿರೋಧ ಮಾಡುತ್ತಾರೆ. ಅದು ಸಹಜ. ಸರ್ಕಾರ ಇಂತಹ ಸಮಯದಲ್ಲಿ ಸಮತೋಲಿತವಾಗಿ ಕೆಲಸ ಮಾಡಬೇಕಿದೆ. ಮಳೆ ಕಡಿಮೆ ಆಗಿರುವುದರಿಂದ ಕೃಷಿಗೆ ಮಾತ್ರವಲ್ಲ, ಕುಡಿಯಲು ನೀರಿಲ್ಲ. ಇದೇ ಕಾರಣಕ್ಕೆ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸಲು ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *