ನವದೆಹಲಿ: ಹಣಕಾಸು ಸಂಸ್ಥೆಗಳು ಸಾಲ ನೀಡುವ ಪ್ರಕ್ರಿಯೆಗಳಲ್ಲಿ ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಉತ್ತೇಜಿಸುವ ಪ್ರಯತ್ನವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಸಾಲ ಖಾತೆಗಳಿಗೆ ದಂಡ ಶುಲ್ಕ ವಿಧಿಸುವ ಕುರಿತಂತೆ ಸಮಗ್ರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಮಾರ್ಗಸೂಚಿಗಳು ಸಣ್ಣ ಹಣಕಾಸು ಬ್ಯಾಂಕುಗಳು, ಸ್ಥಳೀಯ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಪ್ರಾಥಮಿಕ ನಗರ ಸಹಕಾರಿ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್ಬಿಎಫ್ಸಿ) ಮತ್ತು ಅಖಿಲ ಭಾರತ ಹಣಕಾಸು ಸಂಸ್ಥೆಗಳು ಸೇರಿದಂತೆ ಎಲ್ಲ ವಾಣಿಜ್ಯ ಬ್ಯಾಂಕುಗಳಿಗೆ ಅನ್ವಯಿಸುತ್ತವೆ.
ಸಾಲಗಾರರನ್ನು ನ್ಯಾಯಯುತವಾಗಿ ನಡೆಸಿಕೊಳ್ಳಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮತ್ತು ದಂಡ ಶುಲ್ಕಗಳನ್ನು ವಿಧಿಸುವಾಗ ವಿಭಿನ್ನ ಮಾನದಂಡಗಳನ್ನು ಅನುಸರಿಸುವುದರಿಂದ ಉದ್ಭವಿಸುತ್ತಿರುವ ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆರ್ಬಿಐ ಈ ಕ್ರಮ ಕೈಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





