Breaking News

ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಸದ್ಯದಲ್ಲಿಯೇ ವಿಪಕ್ಷ ನಾಯಕನ ನೇಮಕ ಆಗುತ್ತೆ.ಚೆಲುವರಾಯಸ್ವಾಮಿ ಸೇರಿ ಮತ್ತೊಬ್ಬರು ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ,ಚೆಲುವರಾಯಸ್ಬಾಮಿ ಮೇಲೆ ಗಂಭೀರ ಆರೋಪ ಬಂದಿವೆ, ಅವರು ರಾಜಿನಾಮೆ ಕೊಡಬೇಕು ಎಂದರು.

ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ.ಪ್ರಾಥಮಿಕವಾಗಿ ಕಾಣುವಂತೆ ಸತ್ಯ ಎನ್ನುಬಹುದಾದ ಆರೋಪಗಳು ಕೇಳಿ ಬಂದಿವೆ. ದೂರು ಕೊಟ್ಟ ಗುತ್ತಿಗೆದಾರರನ್ನು ಮೊದಲು ಪೊಲೀಸ್ ಠಾಣೆಗೆ ಕರೆಸುತ್ತಿದ್ದಾರೆ.ಗುತ್ತಿಗೆದಾರರನ್ನು ಹೆದರಿಸಿ,ಬೆದರಿಸಿ ಉಲ್ಟಾ ಹೊಡೆಯುವ ಹಾಗೆ ಮಾಡಿದ್ದಾರೆ ಎಂದು ಹೇಳಿದರು. ಕಾವೇರಿ ವಿಷಯದಲಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಗಟ್ಟಿ ನಿಲುವು ತೆಗೆದುಕೊಂಡು ಹೇಳುವ ಪ್ರಯತ್ನ ಮಾಡುತ್ತಿಲ್ಲ.ದೇಶದಲ್ಲಿ ಅಲಯನ್ಸ್ ಉಳಿಸಿಕೊಳ್ಳಲು ಕಾಂಗ್ರೆಸ್ ಹೊರಟಿದೆ.ಬರುವ ಸೀಟುಗಳು ಕಡಿಮೆ ಆಗುತ್ತೆ ಅನ್ನೋ ಭಯ ಕಾಂಗ್ರೆಸ್‌ಗಿದೆ, ಅನೇಕ ಪಕ್ಷಗಳ ಜೊತೆ ಮಾಡಿಕೊಂಡಿರುವ ಅಲಯನ್ಸ್ ಉಳಿಸಿಕೊಳ್ಳಲು‌ ಕಾಂಗ್ರೆಸ್ ವಿಫಲವಾಗಿದೆ ಎಂದರು.ರಾಜ್ಯದಲ್ಲಿ ಪವರ್ ಕಟ್ ಶುರುವಾಗಿದೆ.ಮಳೆಯಿಲ್ಲ, ಗಾಳಿಯಿಲ್ಲ ಅಂತಾರೆ, ಇವರ ಗಾಳಿಯೇ ಉಲ್ಟಾ ಆಗಿದೆ.ಕ್ಷುಲ್ಲಕ ರಾಜಕಾರಣ ಮಾಡಿ ಜನರಿಗೆ ಮೋಸ ಮಾಡುತ್ತಿದ್ದಾರೆ.ಮಿಸ್ ಮ್ಯಾನೇಜ್ಮೆಂಟ್ ಇದೆ, ಹಣಕಾಸಿನ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ. ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೆ,ಮೋದಿಯವರ ನಾಯಕತ್ವ, ಬಿಜೆಪಿ ಪ್ರಸ್ತುತತೆ ಎಲ್ಲರಿಗೂ ಗೊತ್ತಿದೆ.ಹೀಗಾಗಿ ಯಾರೂ ಬಿಜೆಪಿ ಬಿಟ್ಟು ಹೋಗಲ್ಲಾ, ಕಾವೇರಿ ವಿಷಯ ಡೈವರ್ಟ್ ಮಾಡಲು ಪಕ್ಷಾಂತರ ವಿಚಾರ ಮುಂದೆ ತಂದಿದ್ದಾರೆ.

ಭ್ರಷ್ಟಾಚಾರ ಹೆಚ್ಚಾಗಿದೆ ಅಂತಾ ಕಾಂಗ್ರೆಸ್ ಪಾರ್ಟಿಯವರೇ ಹೇಳ್ತಿದ್ದಾರೆ.ಕಾಂಗ್ರೆಸ್‌ಗೆ ನೇತ್ರತ್ವ ಮತ್ತು ನಿಯತ್ತಿಲ್ಲ,ಬಿಜೆಪಿ ಬಂಡೆಗಲ್ಲಂತೆ ಗಟ್ಟಿಯಾಗಿದೆ.ಬಾಂಬೆ ಬಾಯ್ಸ್ ಕಾಂಗ್ರೆಸ್ ಸೇರ್ಪಡೆ ವಿಚಾರ,ಸದ್ಯದ‌ ಮಟ್ಟಿಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ,ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಮಾತಾಡಿದ್ದೇನೆ,ಆ ರೀತಿ ಯಾವುದೇ ಬೆಳವಣಿಗೆ ಆಗಿಲ್ಲಾ ಎಂದಿದ್ದಾರೆ.ಸೋಮಶೇಖರ್, ಹೆಬ್ಬಾರ್ ಪಕ್ಷ ಬಿಟ್ಟು ಹೋಗಲ್ಲಾ ಎಂದಿದ್ದಾರೆ,ನಾಳೆ ಏನಾಗುತ್ತೆ ಅಂತಾ ಹೇಳಲು ನಾನು ಭವಿಷ್ಯಗಾರ ಅಲ್ಲಾ,ನನಗೆ ಇರುವ ಮಾಹಿತಿ ಪ್ರಕಾರ ಯಾರೂ ಬಿಜೆಪಿ ಬಿಟ್ಟು ಹೋಗಲ್ಲಾ ಎಂದರು.

ಮುನೇನಕೊಪ್ಪ ಕೂಡ ನನ್ನೊಂದಿಗೆ ಮಾತಾಡಿದ್ದು ಅವರು ಪಕ್ಷ ತೊರೆಯಲ್ಲಾ ಅಂದಿದ್ದಾರೆ.ನಾನು ಧಾರವಾಡದಿಂದಲೇ ಸ್ಪರ್ಧಿಸುವೆ,ಗಣೇಶ ಹಬ್ಬ ನಮ್ಮ‌ ಭಾಗದಲ್ಲಿ ವಿಜೃಂಭಣೆಯಿಂದ ಮಾಡುತ್ತೇವೆ,ಡಿಜೆ ಸೇರಿದಂತೆ ಯಾವುದೇ ನಿರ್ಬಂಧ ಹೇರಬಾರದು,ಹುಬ್ಬಳ್ಳಿಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ,ಕಳೆದ ಬಾರಿ‌ ಗಣೇಶ ಕೂರಿಸಿದ್ದೇವೆ, ಈ ಬಾರಿ ರಾಜ್ಯ ಸರ್ಕಾರ ಯಾವುದೆ ಗೊಂದಲ ಮಾಡಲ್ಲಾ,ಮಹಾನಗರ ಪಾಲಿಕೆ ಸೂಕ್ತ ತೀರ್ಮಾನ ಮಾಡಬೇಕು ಈದ್ಗಾ ಮೈದಾನ ಮುಸ್ಲೀಮರ ಜಾಗವಲ್ಲಾ, ಅವರು ವಿವಾದ ಮಾಡಬಾರದು.ಅವರಿಗೂ ವರ್ಷದಲ್ಲಿ ಎರಡು ಬಾರಿ ನಮಾಜ್‌ಗೆ ಅವಕಾಶವಿದೆ. ಅನಗತ್ಯ ವಿವಾದವನ್ನು ಸರ್ಕಾರ ಮೈಮೇಲೆ ಎಳೆದುಕೊಳ್ಳಬಾರದು ಎಂದು ಜೋಶಿ ಹೇಳಿದರು.

Share News

About BigTv News

Check Also

ಸಚಿವ ಸಂತೋಷ್ ಲಾಡ್ ಅವರಿಗೆ ಅದ್ದೂರಿ ಗೌರವ ಸನ್ಮಾನ; ಆತ್ಮೀಯ ಭೇಟಿಯಲ್ಲಿ…

ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …

Leave a Reply

Your email address will not be published. Required fields are marked *