Breaking News

ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು..

ನವದೆಹಲಿ: ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಎಂಎನ್‌ಜಿಆರ್‌ಇಜಿಎ (ಮನರೇಗಾ) ನಿಧಿಯನ್ನು ಕೆರೆ ನಿರ್ಮಾಣ, ಮಣ್ಣಿನ ರಸ್ತೆ ಕೆಲಸ ಅಥವಾ ನೆಡುತೋಪು ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಬಳಸಬಹುದು ಎಂದು ಹೇಳಿದರು.
”2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಪ್ರತಿ ಗ್ರಾಮ, ತಾಲೂಕು ಮತ್ತು ಜಿಲ್ಲೆಗಳಲ್ಲಿ ಅಭಿವೃದ್ಧಿಯ ದೀಪ ಬೆಳಗಬೇಕು. ವಿವಿಧ ಅಭಿವೃದ್ಧಿ ಉಪಕ್ರಮಗಳನ್ನು ಸಾಮೂಹಿಕ ಆಂದೋಲನವನ್ನಾಗಿ ಮಾಡಲು ಪ್ರತಿಯೊಬ್ಬರೂ ಕೆಲಸ ಮಾಡಬೇಕು. ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಎಂಬುದು ಬಿಜೆಪಿಗೆ ಕೇವಲ ಘೋಷಣೆಯಲ್ಲ. ಪ್ರತಿ ಕ್ಷಣವೂ ಅದರ ಅಡಿಯಲ್ಲಿ ನಾವು ಬದುಕಬೇಕು” ಎಂದು ಪ್ರಧಾನಿ ಮೋದಿ ಹೇಳಿದರು.

ಮೊದಲು ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾಗಿ ತಮ್ಮದೇ ಅನುಭವ ಉಲ್ಲೇಖಿಸಿದ ಮೋದಿ, ”ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರು ತಮ್ಮ ಗ್ರಾಮ ಮತ್ತು ಜಿಲ್ಲೆಗಳಿಗೆ ಆದ್ಯತೆಯಾಗಿ ಕೆಲವು ಕೆಲಸಗಳನ್ನು ಕೈಗೊಳ್ಳಬೇಕು. ಜನರ ಬೆಂಬಲವನ್ನು ಪಡೆಯುವ ಮೂಲಕ ಯಶಸ್ವಿಗೊಳಿಸಲು ಮುಂದಾಗಬೇಕು” ಎಂದು ಸಲಹೆ ಕೊಟ್ಟರು.

Share News

About BigTv News

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *