ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಜೆಡಿಎಸ್, ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಜೆಡಿಎಸ್ನ ನೂತನ ಕಮಿಟಿ ರಚಿಸಿದೆ.
ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ನಡೆದ ನಾಯಕರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿ.ಎಂ.ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತರನ್ನು ನೇಮಿಸಲಾಗಿದೆ ಎಂದರು. ಆಗಸ್ಟ್ 7ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಕೋರ್ ಕಮಿಟಿಯ ಹೊಸ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆಯನ್ನು ಅಂತಿಮಗೊಳಿಸಲಾಯಿತು ಎಂದು ಹೇಳಿದರು.
ಕಮಿಟಿಯಲ್ಲಿ ಮಾಜಿ ಸಚಿವರಾದ ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪುರ್, ಹೆಚ್.ಕೆ.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಆಲ್ಕೋಡ್ ಹನುಮಂತಪ್ಪ, ಶಾಸಕರಾದ ನೇಮಿರಾಜ ನಾಯಕ್, ರಾಜೂಗೌಡ, ಬಿ.ಎಂ.ಫಾರೂಕ್, ಮಾಜಿ ಶಾಸಕರಾದ ಸುರೇಶ್ ಗೌಡ, ಕೆ.ಎಂ.ತಿಮ್ಮರಾಯಪ್ಪ ವೀರಭದ್ರಪ್ಪ ಹಾಲರವಿ, ಎಂ.ಕೃಷ್ಣ ರೆಡ್ಡಿ, ದೊಡ್ಡಪ್ಪ ಗೌಡ, ಪ್ರಸನ್ನ ಕುಮಾರ್ ಕೆ.ಬಿ.ಸುನೀತಾ ಚೌವ್ಹಾಣ್, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ ಸೇರಿದಂತೆ 21 ಸದಸ್ಯರಿದ್ದಾರೆ. ಕಮಿಟಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




