Breaking News

ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮದುವಣ ಗಿತ್ತಿಯಾದ ಸರ್ಕಾರಿ ಶಾಲೆ….

ಕಲಬುರಗಿ) : ಸಾಥಖೇಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಇಂದು ಬಹುತೇಕ ಪಾಲಕರು ಖಾಸಗಿ ಶಾಲೆಗಳತ್ತ ಆಕರ್ಷಿತರಾಗುತ್ತಾರೆ. ಈ ಮೂಲಕ ಸರ್ಕಾರಿ ಶಾಲೆಗಳಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಶಾಲೆಗಳಲ್ಲಿ ಕಟ್ಟಡಗಳು ಹಳೆಯದಾಗಿರುವುದು. ಹೀಗಾಗಿ, ಪುನಃ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಲು ತಾವೇ ಮುಂದೆ ನಿಂತು ಕಟ್ಟಡಕ್ಕೆ ಬಣ್ಣದ ಮೆರುಗು ನೀಡಿದ್ದಾರೆ ಹಳೆ ವಿದ್ಯಾರ್ಥಿಗಳು..

ಸಾಥಖೇಡ ಗ್ರಾಮದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಸುಮಾರು 28 ರಿಂದ 30 ವರ್ಷಗಳಿಂದ ಯಾವುದೇ ಸೌಂದರ್ಯೀಕರಣ ಕಂಡಿಲ್ಲ. ಗೋಡೆಗಳು ಬಿರುಕು ಬಿಟ್ಟಿದ್ದವು. ಕಬ್ಬಿಣದ ತಂತಿಗಳು ತುಕ್ಕು ಹಿಡಿದಿದ್ದವು. ಶಾಲಾ ಕಟ್ಟಡ ಸೌಂದರ್ಯಕ್ಕೆ ಹಣ ಬಿಡುಗಡೆ ಮಾಡುವಂತೆ ಗ್ರಾಮಸ್ಥರು ಮತ್ತು ಶಾಲೆಯ ಮುಖ್ಯ ಶಿಕ್ಷಕರು ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಶಾಸಕರಿಗೆ ಮನವಿ ಮಾಡಿದ್ದಾರೆ. ಆದರೆ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ, ಹಳೆ ವಿದ್ಯಾರ್ಥಿಗಳ ತಂಡ ಸ್ವಂತ ಖರ್ಚಿನಿಂದ ಕಟ್ಟಡಕ್ಕೆ ಬಣ್ಣ ಹಚ್ಚಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *