Breaking News

ಎಚ್ಚೆತ್ತ ಅಧಿಕಾರಿಗಳು ​ಕೊನೆಗೂ ಈ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ….

ಚಿಕ್ಕಮಗಳೂರು : ಕಳೆದ ಎರಡು ದಿನಗಳಿಂದ ಈ ಟಿವಿ ಭಾರತ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕಾರ್ಲೆ ಹಾಗೂ ಜೇಡಿಕೊಂಡ ಎಂಬ ಕುಗ್ರಾಮಗಳಲ್ಲಿ ಯಾವುದೇ ರೀತಿಯ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೇ ಜನರು ಪರದಾಟ ನಡೆಸುತ್ತಿದ್ದ ಸುದ್ದಿಯೊಂದನ್ನು ಬಿತ್ತರಿಸಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ​ಕೊನೆಗೂ ಈ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲ ಮೂಲ ಸೌಕರ್ಯ ನೀಡುವ ಭರವಸೆ ನೀಡಿದ್ದಾರೆ.

ಪಟ್ಟಣದಿಂದ ತುಂಬಾ ದೂರ ಇರುವಂತಹ ಕಾಡಂಚಿನ ಗ್ರಾಮದ ಜನರು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಯಾವುದೇ ಮೂಲ ಸೌಕರ್ಯದ ವ್ಯವಸ್ಥೆ ಇಲ್ಲದೇ ನಿತ್ಯ ಕಾಡು ಪ್ರಾಣಿಗಳಂತೆ ಜೀವನ ನಡೆಸುತ್ತಿದ್ದರು. ಮೂಲ ಸೌಕರ್ಯಕ್ಕಾಗಿ ಸರ್ಕಾರಿ ಕಚೇರಿಗಳು ಹಾಗೂ ಜನ ಪ್ರತಿ ನಿಧಿಗಳ ಮನೆಗಳ ಬಾಗಿಲು ಅಲೆದು ಸುಸ್ತಾಗಿ ಹೋಗಿದ್ದರು. ಪ್ರಮುಖವಾಗಿ ವಿದ್ಯುತ್, ಚರಂಡಿ, ರಸ್ತೆ, ಹಾಗೂ ಮನೆಗಾಗಿ ಹೋರಾಟ ಮಾಡಿದ್ದ ಇವರು ನಮ್ಮನ್ನು ಮನುಷ್ಯರಂತೆ ನೋಡಿ ಎಂದು ಹಲವು ಬಾರಿ ಮನವಿ ಮಾಡಿದ್ದರು. ಹೀಗಾಗಿ ಕೊನೆಗೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಎಲ್ಲ ರೀತಿ ಮೂಲ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನು ಗ್ರಾಮಸ್ಥರಿಗೆ ಕೊಟ್ಟಿದ್ದಾರೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *