Breaking News

ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್​ನ 22ನೇ ಶಾಖೆ ಉದ್ಘಾಟನೆ…

ಕೋಲಾರ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್​ನ 22ನೇ ಶಾಖೆ ಉದ್ಘಾಟನೆಗೊಂಡಿದೆ. ಸಂಸ್ಥೆಯ ಒಟ್ಟಾರೆ 109 ನೇ ಶಾಖೆ ಇದಾಗಿದೆ. ಕಂಪನಿ ಎಂಡಿ ಶೈಲಜಾ ಕಿರಣ್ ಅವರು ಈ ಶಾಖೆಯನ್ನು ವರ್ಚುಯಲ್​ ಆಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಹಕರು ಭಾಗವಹಿಸಿದ್ದರು.

ನೂತನ ಶಾಖೆ ಉದ್ಘಾಟನೆ ಬಳಿಕ ಮಾತನಾಡಿದ ಮಾರ್ಗದರ್ಶಿ ಚಿಟ್ಸ್​ ನಿರ್ದೇಶಕರಾದ ಪಿ ಲಕ್ಷ್ಮಣ್​ರಾವ್​, ಕೋಲಾರ ಜನತೆಯ ಸಹಕಾರ ಅಮೂಲ್ಯವಾದದ್ದು ಎಂದು ಹೇಳಿದರು. ಜನತೆ ಮಾರ್ಗದರ್ಶಿ ಚಿಟ್ಸ್​ ಕಂಪನಿಯಿಂದ ಸೌಲಭ್ಯಗಳನ್ನು ಪಡೆಯಬಹುದು. ಇಂದಿನವರೆಗೆ ಕೋಲಾರ ಶಾಖೆಯಲ್ಲಿ 19 ಕೋಟಿ ವಹಿವಾಟು ನಡೆಸಲಾಗಿದ್ದು, ಮಾಸಾಂತ್ಯಕ್ಕೆ 26 ಕೋಟಿ ರೂಗಳ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆಯ ಸಾರ್ವಜನಿಕರ ಅಗತ್ಯತೆಗಳಿಗೆ ಅನುಸಾರವಾಗಿ ಸಂಸ್ಥೆಯು ತನ್ನ ಚೀಟಿ ಸೇವೆಗಳನ್ನು ನೀಡಲು ಸದಾ ಬದ್ಧವಾಗಿದೆ ಎಂದರು. ಕೋಲಾರ ಶಾಖೆಯಲ್ಲಿ 1 ಲಕ್ಷದಿಂದ 30 ಲಕ್ಷ ಮೊತ್ತದ ವರೆಗಿನ ಚೀಟಿ ಗುಂಪುಗಳನ್ನು ಪ್ರಾರಂಭಿಸಲಾಗಿದೆ. ಚೀಟಿ ಗುಂಪುಗಳು ಕ್ರಮವಾಗಿ 25, 30, 40 ಮತ್ತು 50 ತಿಂಗಳುಗಳ ಅವಧಿಯದ್ದಾಗಿವೆ.

ಚಂದಾದಾರರು ತಿಂಗಳಿಗೆ 2 ಸಾವಿರದಿಂದ 1 ಲಕ್ಷ ರೂವರೆಗೂ ಪಾವತಿ ಮಾಡಬಹುದಾಗಿದೆ. ಶೀಘ್ರದಲ್ಲೇ ನೂತನ ಚೀಟಿ ಗುಂಪುಗಳನ್ನು ಪ್ರಾರಂಭಿಸುವುದಾಗಿ ಅವರು ಹೇಳಿದರು. ಮುಂಬರುವ ಅಕ್ಟೋಬರ್​ ತಿಂಗಳಲ್ಲಿ ಹಾವೇರಿಯಲ್ಲಿ ನೂತನ ಶಾಖೆ ಪ್ರಾರಂಭಿಸುವುದಾಗಿ ಹೇಳಿದರು. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಮತ್ತೆರಡು ನೂತನ ಶಾಖೆಗಳನ್ನು ತೆರೆಯಲು ಯೋಚಿಸಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಮುಂಬರುವ ದಿನಗಳಲ್ಲಿ ಸೇವೆಯ ವಿಸ್ತರಣೆಗೆ ಮುಂದಾಗುವುದಾಗಿ ಅವರು ತಿಳಿಸಿದ್ದಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *