Breaking News

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮನವಿಯನ್ನು ಆಲಿಸಲು ಇಂದೇ ವಿಚಾರಣಾ ಪೀಠವನ್ನು ರಚಿಸುವುದಾಗಿ ಸುಪ್ರೀಂಕೋರ್ಟ್​ ಹೇಳಿಕೆ….

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮನವಿಯನ್ನು ಆಲಿಸಲು ಇಂದೇ ವಿಚಾರಣಾ ಪೀಠವನ್ನು ರಚಿಸುವುದಾಗಿ ಸುಪ್ರೀಂಕೋರ್ಟ್​ ಹೇಳಿದೆ. ಆಗಸ್ಟ್​ ತಿಂಗಳ ನದಿ ನೀರಿನ ಪಾಲನ್ನು ಬಿಡುಗಡೆ ಮಾಡುವಲ್ಲಿ ಕರ್ನಾಟಕ ವಿಳಂಬ ಮಾಡಿದ ಹಿನ್ನೆಲೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಅವರ ಪೀಠದ ಮುಂದೆ ತಮಿಳುನಾಡು ಪರ ವಾದ ಮಂಡಿಸಿದ ಮಾಜಿ ಅಟಾರ್ನಿ ಜನರಲ್​, ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ ಅವರು ಇದು ತುರ್ತು ಮನವಿಯಾಗಿದೆ. ಅರ್ಜಿಯನ್ನು ತಕ್ಷಣಕ್ಕೆ ವಿಚಾರಣೆ ನಡೆಸಬೇಕು ಎಂದು ಕೋರಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ಆಗಸ್ಟ್‌ಗೆ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕಿದೆ. ಈ ಬಗ್ಗೆ ತುರ್ತು ವಿಚಾರಣೆ ನಡೆಸಬೇಕಿದೆ. ಹೀಗಾಗಿ ಪೀಠವನ್ನು ರಚಿಸಬೇಕು. ಕೊನೆಯದಾಗಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಅವರ ನೇತೃತ್ವ ಪೀಠ ವಿಚಾರಣೆ ನಡೆಸಿತ್ತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ವಾದ ಮಂಡಿಸಿದರು.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *