ನವದೆಹಲಿ: ದೆಹಲಿ ಸರ್ಕಾರಿ ಅಧಿಕಾರಿಯೊಬ್ಬರು ತನ್ನ ಮೃತ ಸ್ನೇಹಿತನ ಅಪ್ರಾಪ್ತ ಪುತ್ರಿಯ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
2020 ಮತ್ತು 2021ರ ನಡುವೆ ಅತ್ಯಾಚಾರದ ಪ್ರಕರಣ ನಡೆದಿದೆ ಎನ್ನಾಗಿದೆ. ಬುರಾರಿ ಪೊಲೀಸ್ ಠಾಣೆಯಲ್ಲಿ ಅಧಿಕಾರಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿ ಅಧಿಕಾರಿಯ ವಿರುದ್ಧ ಆಗಸ್ಟ್ 13 ರಂದು ಎಫ್‌ಐಆರ್ ದಾಖಲಿಸಲಾಗಿದೆ.
ದೂರುದಾರರ ಪ್ರಕಾರ, ಆರೋಪಿಯು 2020 ಮತ್ತು 2021ರ ನಡುವೆ ಹಲವಾರು ತಿಂಗಳುಗಳ ಕಾಲ ತನ್ನ ಮೇಲೆ ಲೈಂಗಿಕ ಕಿರುಕುಳ, ದೈಹಿಕ ಕಿರುಕುಳ ಮತ್ತು ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಸಂತ್ರಸ್ತೆ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





