ಬೆಂಗಳೂರು,ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಗೆ ಗಾಳ ಹಾಕಿದ್ದು, ಭರ್ಜರಿ ಅನುದಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ.
ಹೌದು, ಈಗಾಗಲೇ ಬಿಜೆಪಿಯಲ್ಲಿ ಎಸ್ ಟಿ ಸೋಮಶೇಖರ್ ಪಕ್ಷ ತ್ಯಜಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಮೊನ್ನೆಯಷ್ಟೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದರು. ಇನ್ನೂ ಕಾಂಗ್ರೆಸ್ ನ ಆಪರೇಷನ್ ಹಸ್ತ ಬೆನ್ನಲ್ಲೇ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ. ಎಸ್.ಟಿ.ಸೋಮಶೇಖರ್ ಶಾಸಕರಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ 7.63 ಕೋಟಿ ರೂ. ಅನುದಾನ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





