Breaking News

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ….

ಮಂಗಳೂರು(ದಕ್ಷಿಣಕನ್ನಡ):ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.

ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್​ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988/2019ರಡಿ, ಆ. 6ರಿಂದ 20 ರವರೆಗೆ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರ ಅನುಜ್ಞಾ ಪತ್ರ (ಡಿಎಲ್)ಗಳನ್ನು ಅಮಾನತುಪಡಿಸುವ ಬಗ್ಗೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕಚೇರಿ ಪ್ರಕಟಣೆ ತಿಳಿಸಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *