Breaking News

ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಮರಾಠಾ ಸಮಿತಿ ವತಿಯಿಂದ ಪ್ರತಿಭಟನೆ..

ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಇತ್ತೀಚಿಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಅದೇ ಸ್ಥಳದಲ್ಲಿಯೇ ಮರುಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಮರಾಠಾ ಶ್ರೀ ಭಾರತಿ ಮಠ ಟ್ರಸ್ಟ್ ಸಮಿತಿ ವತಿಯಿಂದ ನಗರದ ಮಿನಿವಿಧಾನ ಸೌಧದ ಆವರಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ನಗರದ ತಾಲೂಕು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಮರಾಠಾ ಶ್ರೀ ಭಾರತಿಮಠ ಅಧ್ಯಕ್ಷರಾದ ಸುನೀಲ್ ದಳವಿ ಮಾತನಾಡಿ, 16 ಅಡಿ ಎತ್ತರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯು ತಯಾರಾಗಿದ್ದು, ಈ ಪುತ್ಥಳಿಯ ಮೂರ್ತಿ ತೆರವುಗೊಳಿಸಿದ ಸ್ಥಳದಲ್ಲಿಯೇ ವ ಪ್ರತಿಷ್ಠಾಪನೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸುತ್ತೇವೆಂದರು.

ಈ ಸಂದರ್ಭದಲ್ಲಿ ಮರಾಠಾ ಶ್ರೀ ಭಾರತಿಮಠದ ಕಾರ್ಯದರ್ಶಿ ನಾರಾಯಣ ವೈದ್ಯ, ವಿವಿಧ ದಲಿತಪರ ಸಂಘಟನೆಗಳ ಮುಖಂಡ ಗುರುನಾಥ ಉಳ್ಳಿಕಾಶಿ, ಶ್ರೀ ಭಾರತಿ ಮಠ ಟ್ರಸ್ಟ್ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *