ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿತು. ಇಡೀ ವಿಶ್ವವೇ ಎದುರು ನೋಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್ ವಿಕ್ರಮ್ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಸರಿಯಾಗಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದರು. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ

ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಚಂದ್ರಯಾನ-3 ಗಗನನೌಕೆಯನ್ನು ಇಸ್ರೋ ಯಶಸ್ವಿಯಾಗಿ ಉಡಾಯಿಸಿತ್ತು. ಅಂದಿನಿಂದ ಯೋಜನೆಯ ಯಶಸ್ಸಿಗಾಗಿ ಭಾರತ ಮಾತ್ರವಲ್ಲದೇ ಜಗತ್ತು ಹಾರೈಸಿ ಕಾತುರದಿಂದ ಕಾಯುತ್ತಿತ್ತು. ಭೂಮಿಯಿಂದ ನಭಕ್ಕೆ ಚಿಮ್ಮಿದ 41ನೇ ದಿನದ ನಂತರ ಇಂದು ಸಂಜೆ ಚಂದ್ರನನ್ನು ವಿಕ್ರಮ್ ಲ್ಯಾಂಡರ್ ಸ್ಪರ್ಶಿಸಿತು. ಈ ಮೂಲಕ ಭಾರತದ ಹೆಜ್ಜೆ ಗುರುತುಗಳು ಚಂದ್ರನೂರಿನಲ್ಲಿ ಮೂಡಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

