ಮಂಗಳೂರು(ದಕ್ಷಿಣ ಕನ್ನಡ): ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಫುಟ್ ಪಾತ್ನಲ್ಲಿ ಕಟ್ಟಡ ತ್ಯಾಜ್ಯವನ್ನು ಎಸೆದ ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆ ದಂಡ ವಿಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ.
ಪ್ರಶಾಂತ್ ಶೇಟ್ ಎಂಬವರಿಂದ ಕಟ್ಟಡ ತ್ಯಾಜ್ಯವನ್ನು ಫುಟ್ ಪಾತ್ನಲ್ಲಿ ಹಾಕಿದ ಕಾರಣ ಸ್ವಚ್ಛತಾ ದರ ಎಂದು ಮಂಗಳೂರು ಮಹಾನಗರ ಪಾಲಿಕೆ ರೂ. 4 ಸಾವಿರ ದಂಡ ವಸೂಲು ಮಾಡಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ಧಕ್ಕೆ ಉಂಟಾಗುತ್ತಿದೆ. ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ಧಕ್ಕೆ ತರುವವರ ವಿರುದ್ಧ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.
ಇನ್ನು ಮುಂದೆ ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





