ಮಂಗಳೂರು: ಬೈಕ್ನಲ್ಲಿ ಬಂದ ಯುವಕನೋರ್ವ ಯುವತಿಯೋರ್ವಳನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ಇಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗೌರಿ (18) ಕೊಲೆಗೀಡಾದ ಯುವತಿ. ಕೃತ್ಯ ಎಸಗಿದ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು, ಈತನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ.
ಗೌರಿ ಪುತ್ತೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಪದ್ಮರಾಜ್ ಮತ್ತು ಗೌರಿ ಪರಿಚಯದವರಾಗಿದ್ದರು. ಅಲ್ಲದೇ ಈ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ಸಂಬಂಧ ವಿಟ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಇಂದು ಪುತ್ತೂರು ಬಸ್ ನಿಲ್ದಾಣದಲ್ಲಿ ಇಬ್ಬರ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಪದ್ಮರಾಜ್ ಮಹಿಳಾ ಪೊಲೀಸ್ ಠಾಣೆ ಬಳಿ ಹೋಗುತ್ತಿದ್ದ ಗೌರಿಗೆ ಬೈಕ್ನಲ್ಲಿ ಬಂದು ಕುತ್ತಿಗೆಗೆ ಚೂರಿಯಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





