Breaking News

ಕೇರಳದಲ್ಲಿ ಆಫ್ರಿಕನ್ ಸ್ಟೈನ್ ಫೀವರ್…….

ಮೈಸೂರು: ಕೇರಳದಲ್ಲಿ ಆಫ್ರಿಕನ್ ಸ್ಟೈನ್ ಫೀವರ್ (African Spain fever) ಕಾಣಿಸಿಕೊಂಡ ಹಿನ್ನೆಲೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಟಿ ರವಿಕುಮಾರ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಬಿ ಪ್ರಸನ್ನ ಮತ್ತು ತಂಡ ಕೇರಳ ಮತ್ತು ಕರ್ನಾಟಕ ಗಡಿಭಾಗವಾದ ಬಾವಲಿ ಚೆಕ್ ಪೋಸ್ಟ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಬಿ ಪ್ರಸನ್ನ, ‘ಆಫ್ರಿಕನ್ ಸ್ಟೈನ್ ಫೀವರ್ ಆಗಸ್ಟ್ ಮೊದಲ ವಾರ ಕೇರಳದಲ್ಲಿ ಪತ್ತೆಯಾಗಿದೆ. ಹಂದಿಗಳಲ್ಲಿ ಜ್ವರ, ಮುಖ ಮತ್ತು ದೇಹದಲ್ಲಿ ಕೆಪ್ಪು ಬಣ್ಣದ ಗುಳ್ಳೆಗಳು, ಬಾಯಿಯಲ್ಲಿ ಜೊಲ್ಲು ಸುರಿಯುವುದು, ವಾಂತಿ, ಬೇಧಿಯಾಗುವುದು ರೋಗದ ಪ್ರಮುಖ ಲಕ್ಷಣ. ಈ ರೋಗ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ. ಯಾವುದೇ ಕಾರಣಕ್ಕೂ ಮನುಷ್ಯರಿಗೆ ಹರಡುವುದಿಲ್ಲ’ ಎಂದು ತಿಳಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *