Breaking News

ನವಿಲುತೀರ್ಥ ಜಲಾಶಯದ ಬಳಿಕಳೆದ ಭಾನುವಾರ ಧಾರವಾಡ ಮೂಲದ ಆಸ್ಟ್ರೇಲಿಯಾ ನಿವಾಸಿ ಪ್ರಿಯದರ್ಶಿನಿ ಶವ ಪತ್ತೆ…

ಧಾರವಾಡ: ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದ ಬಳಿಕಳೆದ ಭಾನುವಾರ ಧಾರವಾಡ ಮೂಲದ ಆಸ್ಟ್ರೇಲಿಯಾ ನಿವಾಸಿ ಪ್ರಿಯದರ್ಶಿನಿ ಲಿಂಗರಾಜ್ ಪಾಟೀಲ (40) ಎಂಬ ಮಹಿಳೆಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನು ಮಹಿಳೆ ಡೆತ್ ನೋಟ್ ಬರೆದು ಅದನ್ನು ತಮ್ಮ ತಂದೆಗೆ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಮಗೆ ಹಲವರು ಕಿರುಕುಳ ನೀಡಿದ್ದಾರೆ. ಕುಟುಂಬಕ್ಕೋಸ್ಕರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್​ನೋಟ್​ನಲ್ಲಿ ಮಹಿಳೆ ಬರೆದಿದ್ದಾರೆಂದು ಗೊತ್ತಾಗಿದೆ. “ಪ್ರಿಯದರ್ಶಿನಿಗೆ ಇಬ್ಬರು ಮಕ್ಕಳಿದ್ದು, ಪತಿ ಜೊತೆ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದರು. ಮಕ್ಕಳು ಆಸ್ಟ್ರೆಲಿಯಾದಲ್ಲಿಯೇ ಜನಿಸಿದ್ದರಿಂದ ಆಸ್ಟ್ರೇಲಿಯಾ ಪೌರತ್ವ ಪಡೆದುಕೊಂಡಿದ್ದು ಅಲ್ಲಿಯೇ ಇದ್ದಾರೆ. ಆದರೆ, ಆಸ್ಟ್ರೇಲಿಯಾದಿಂದ ಇತ್ತೀಚೆಗೆ ಸ್ವದೇಶಕ್ಕೆ ಮರಳಿದ್ದ ಪ್ರಿಯದರ್ಶಿನಿ, ಮನೆಗೂ ಬಂದಿರಲಿಲ್ಲ” ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

Share News

About BigTv News

Check Also

ಅವಳಿ ನಗರದಲ್ಲಿ ಗಾಂಜಾ ಪೆಡ್ಲರ್‌ಗಳ ಬೇಟೆ; 6 ಮಂದಿ ಅಂದರ್, 491 ಗ್ರಾಂ ಗಾಂಜಾ ಜಪ್ತಿ!

ಹುಬ್ಬಳ್ಳಿ–ಧಾರವಾಡದಲ್ಲಿ ಗಾಂಜಾ ಪೆಡ್ಲರ್‌ಗಳಿಗೆ ಖಾಕಿ ಸಿಂಹಸ್ವಪ್ನ; ಎರಡು ಕಡೆ ಏಕಕಾಲಕ್ಕೆ ಪೊಲೀಸ್ ಬೇಟೆ, 6 ಮಂದಿ ಅಂದರ್.. ಗಾಂಜಾ ದಂಧೆಗೆ …

Leave a Reply

Your email address will not be published. Required fields are marked *