Breaking News

ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್​ ಇಂದು ಅಧಿಕಾರ ಸ್ವಿಕಾರ….

ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್​ ಇಂದು ಅಧಿಕಾರ ವಹಿಸಿಕೊಂಡರು. ನೂತನ ಎಸ್​ಪಿಗೆ ವರ್ಗಾವಣೆಗೊಂಡ ಡಾ. ಅರುಣ್​ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಎಸ್​ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯ ಮೂರನೇ ಮಹಿಳಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಮಾಲಿನಿ‌ ಕೃಷ್ಣಮೂರ್ತಿ ಹಾಗೂ ಸೋನಿಯಾ ನಾರಂಗ್ ದಾವಣಗೆರೆ ಎಸ್​ಪಿಯಾಗಿ ಕಾರ್ಯನಿರ್ವಹಿಸಿದ್ದರು.

ಇತ್ತೀಚಿಗೆ ಉಮಾ ಪ್ರಶಾಂತ್ ​ಅವರನ್ನು ಚಿಕ್ಕಮಗಳೂರಿನಿಂದ ದಾವಣಗೆರೆಗೆ ವರ್ಗಾವಣೆ ಮಾಡಲಾಗಿತ್ತು. ನಿರ್ಗಮಿತ ಎಸ್​ಪಿ ಡಾ.ಅರುಣ್ ಅವರನ್ನು ಕಲಬುರಗಿ ಪೊಲೀಸ್​ ತರಬೇತಿ ಶಾಲೆಗೆ ವರ್ಗಾವಣೆ ಮಾಡಲಾಗಿದೆ.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *