ಶಿವಮೊಗ್ಗ: ಕುಮಾರ ಬಂಗಾರಪ್ಪ ನಮ್ಮ ನಾಯಕರು. ಅವರು ಕಾಂಗ್ರೆಸ್ಗೆ ಸೇರಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ವಿರೋಧ ಪಕ್ಷವನ್ನು ದುರ್ಬಲ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಇದು ಫಲ ನೀಡಲ್ಲ ಎಂದರು.
ಕುಮಾರ ಬಂಗಾರಪ್ಪ ನಮ್ಮ ನಾಯಕರು. ನಮ್ಮ ಪಕ್ಷದ ಶಾಸಕರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದಲ್ಲಿಯೇ ಇದ್ದಾರೆ. ಅವರು ಎಲ್ಲೂ ಹೋಗಲ್ಲ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲ್ಲ. ಕಾಂಗ್ರೆಸ್ ತನ್ನ ದೌರ್ಬಲ್ಯವನ್ನು ಮುಚ್ಚಿಕೊಳ್ಳಲು ಎಲ್ಲರನ್ನೂ ಪಕ್ಷಕ್ಕೆ ಕರೆದುಕೊಳ್ಳುತ್ತಿದೆ. ಅವರು ಬರ್ತಾರೆ ಇವರು ಬರ್ತಾರೆ ಎಂದು ಸುಳ್ಳು ಹೇಳಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





